ದೊಡ್ಡಬಳ್ಳಾಪುರದ ಇಬ್ಬರಿಗೆ ಕೊರೋನಾ ಸೋಂಕು ದೃಢ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

0
29

ದೊಡ್ಡಬಳ್ಳಾಪುರ ನಗರದಲ್ಲಿ ಮತ್ತೆ ಇಬ್ಬರಿಗೆ ಸೋಂಕು ದೃಡಪಟ್ಟಿರುವುದು ಖಚಿತವಾಗಿದೆ. ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5ಕ್ಕೆ ಏರಿದ್ದು. ಈ ನಿಟ್ಟಿನಲ್ಲಿ ಆತಂಕದ ಛಾಯೆ ಆವರಿಸಿದೆ. ಆದರೆ ಇವರ್ಯಾರು ದೊಡ್ಡಬಳ್ಳಾಪುರದಲ್ಲಿ ಸಂಪರ್ಕ ಹೊಂದಿಲ್ಲದ ಕಾರಣ ಸಾರ್ವಜನಿಕರ ಸಮಾದಾನಕ್ಕೆ ಕಾರಣವಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ತಾಂಡದ ಮೂಲ ನಿವಾಸಿಯಾದ 45 ವರ್ಷದ ವ್ಯಕ್ತಿ (ಕ-2331), ಕಳೆದ ಐದು ವರ್ಷದಿಂದ ಮುಂಬೈನಲ್ಲಿ ನೆಲೆಸಿದ್ದು, (ಕ-1606, ಕ-1607, ಕ-1608) ಸಂಪರ್ಕ ಹೊಂದಿದ್ದು, ಲಾಕ್ ಡೌನ್ ಸಡಿಲಿಕೆ ಹಿನ್ನೆಲೆ, ಗ್ರಾಮಕ್ಕೆ ಹಿಂದಿರುಗುವ ಮಾರ್ಗದ ವೇಳೆ ಆರೋಗ್ಯ ತಪಾಸಣೆ ನಡೆಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿದೆ.


ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿ ನಿವಾಸಿಯಾದ 27 ವರ್ಷದ ಪೊಲೀಸ್ ಪೇದೆ (ಕ-2332), ಹಾಸನ ಜಿಲ್ಲೆಯ ಕಂಟೈನ್ಮೆಂಟ್ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ (ಕ-1993)ರ ಸಂಪರ್ಕ ಹೊಂದಿದ್ದ ಹಿನ್ನೆಲೆ, ಆರೋಗ್ಯ ತಪಾಸಣೆ ನಡೆಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿದೆ.

ಇಬ್ಬರು ಕೊರೋನಾ ಸೋಂಕಿತರು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here