
ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಫ್ತಿಯಲ್ಲಿರುವ ತೋಟವೊಂದರಲ್ಲಿ ನಡೆದ ಗ್ರಾಮ ಪಂಚಾಯತಿ ಚುನಾವಣಾ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
.
ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕಗಳು ಘೋಷಣೆಯಾಗದಿದ್ದರೂ ಈಗಾಗಲೇ ಚುನಾವಣೆಗೆ ರಾಜ್ಯದ ಪ್ರಮುಖ ಮೂರು ಪಕ್ಷಗಳು ಭರ್ಜರಿ ಸಿದ್ದತೆಗಳನ್ನು ನಡೆಸುತ್ತಿದ್ದು, ಈ ನಡುವಲ್ಲೇ ಶೀರ್ಘಗತಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದುವುದರಿಂದ ರಾಜಕೀಯ ಪಕ್ಷಗಳ ಕಾರ್ಯಗಳು ಮತ್ತಷ್ಟು ಚುರುಕುಗೊಳ್ಳುವಂತೆ ಮಾಡಿದೆ. ಇದಕ್ಕೆ ಉದಾಹರಣೆಯಂತೆ ಇಂದು ನಡೆದಿರುವ ಚುನಾವಣಾ ಪೂರ್ವಭಾವಿ ಸಭೆ ನಡೆದಿರುವುದು ಸಾಕ್ಷಿಯಾಗಿದೆ.

ಇದೇ ಸಮಯದಲ್ಲಿ ಟಿ.ವೆಂಕಟರಮಣಯ್ಯ ಮಾತನಾಡಿ ಚುನಾವಣಾ ಪಟ್ಟಿಯಲ್ಲಿರುವವರನ್ನು ಗುರುತಿಸಿ, ಅಂಥವರನ್ನು ಸಂಪರ್ಕಿಸಿ, ಅವರಿಗೆ ತಾಲೂಕಿನಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸ ಕಾರ್ಯಗಳು ನೆನಪು ಮಾಡಿಕೊಡಿ , ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸದಸ್ಯರುಗಳನ್ನು ಗೆಲ್ಲುವದರೊಂದಿಗೆ ತಾಲೂಕಿನ ಎಲ್ಲಾ ಪಂಚಾಯಿತಿಗಳಲ್ಲೂ ಕಾಂಗ್ರೆಸ್ ಮೇಲುಗೈಯಾಗಿ ಸಾಧಿಸಬೇಕು, ಭಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯೊಂದರಲ್ಲೇ 48 ಸದಸ್ಯರುಗಳನ್ನು ಒಳಗೊಂಡಿದ್ದು, ಕನಿಷ್ಠ 25 ರಿಂದ 30 ಸದಸ್ಯರುಗಳು ಗೆಲ್ಲವುದರ ಮೂಲಕ ತಾಲೂಕಿನಾದ್ಯಂತ ಕಾಂಗ್ರೆಸ್ ಬಲವರ್ದನೆಗೊಳ್ಳಬೇಕು ಎಂದು ಸೇರಿದ್ದ ಕಾಂಗ್ರೆಸ್ ಮುಖಂಡರುಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ತಿಳಿಸಿದರು. ತಾಲೂಕಿನಾದ್ಯಂತ ಬರುವ ಗ್ರಾಮ ಪಂಚಾಯಿತಿಗಳ ವ್ಯಾಫ್ತಿಯ ಹಳ್ಳಿಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಇಲ್ಲಿಯವರೆಗೂ ಗ್ರಾಮೀಣ ಭಾಗಗಳಲ್ಲಿ ಏನೆಲ್ಲಾ ಕೆಲಸ ಕಾರ್ಯಗಳನ್ನು ಮಾಡಿದೆ ಎಂಬುದನ್ನು ತಿಳಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು

ಕೆಎಂಎಫ್ ನ ನಿರ್ದೇಶಕರಾದ ಬಿ.ಸಿ ಆನಂದ್ ಕುಮಾರ್, ಜಿಲ್ಲಾ ಪಂಚಾಯ್ತಿ ಕಾಂಗ್ರೆಸ್ ಸದಸ್ಯರಾದ ಅರುಣ, ರಂಗರಾಜ್, ಬೋರಲಿಂಗಯ್ಯ, ಕಸವನಹಳ್ಳಿ ಅಂಬರೀಶ್, ತಾಲ್ಲೂಕ್ ಪಂಚಾಯ್ತಿ ಕಾಂಗ್ರೆಸ್ ಸದಸ್ಯರು, , ಬಾಶೆಟ್ಟಿಹಳ್ಳಿ ಪಂಚಾಯ್ತಿ ಕಾಂಗ್ರೆಸ್ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು