ಉಡುಪಿಶಾಸಕರಿಂದ ಆದಿ ಉಡುಪಿಯ ಎ.ಪಿ.ಎಂ.ಸಿ ಮಾರುಕಟ್ಟೆಗೆ ಭೇಟಿ

0
39
ಉಡುಪಿಶಾಸಕರಿಂದ ಆದಿ ಉಡುಪಿಯ ಎ.ಪಿ.ಎಂ.ಸಿ ಮಾರುಕಟ್ಟೆಗೆ ಭೇಟಿ

ಉಡುಪಿ : ಇಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಆದಿ ಉಡುಪಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಅಧಿಕಾರಿಗಳೊಂದಿಗೆ ಭೇಟಿ ಭೇಟಿ ನೀಡಿದರು.*

ಸದ್ರಿ ಮಾರುಕಟ್ಟೆಯಲ್ಲಿ ವಾರದಲ್ಲಿ ಬುಧವಾರದ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಗಿತ್ತು, ಗುರುವಾರದಿಂದ ಅಂಬಾಗಿಲು ಬೀಡಿನಗುಡ್ಡೆ ಭಾಗದ ಬೀದಿಗಳಲ್ಲಿ ತರಕಾರಿ ವ್ಯಾಪಾರ ಮಾಡುತ್ತಿರುವವರನ್ನು ಮತ್ತು ಹೋಲ್ಸೇಲ್ ವ್ಯಾಪಾರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿದ ಅವರಿಗೆ ಇಲ್ಲಿ ದಿನನಿತ್ಯದ ವ್ಯಾಪಾರಕ್ಕೆ ಅನುಮತಿಯನ್ನು ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತರಾದ ಆನಂದ್ ಸಿ ಕಲ್ಲೋಲಿಕರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮೋಹನ್ ರಾಜ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಾದ ಮಂಜುನಾಥ್ ಮತ್ತು ಉಡುಪಿ ನಗರ ಠಾಣೆಯ ಉಪ ನಿರೀಕ್ಷಕರಾದ ಶಕ್ತಿವೇಲು ಹಾಗೂ ಸಂಚಾರಿ ಪೊಲೀಸ್ ನಿರೀಕ್ಷಕರಾದ ಅಬ್ದುಲ್ ಖಾದರ್ ಹಾಗೂ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೆ ಪ್ರಸಾದ್ ಭಟ್ ಕಾರ್ಯದರ್ಶಿಗಳಾದ ಗಾಯತ್ರಿ ಮತ್ತು ವರ್ತಕರಾದ ವಿಠ್ಠಲ್ ಪೈ ಹಾಗೂ ಹರೀಶ್ ರಾಮ್ ಬನ್ನಂಜೆ ಮತ್ತು ಇತರ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here