ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ 19 ಸಭೆ

0
36

ಮಾನ್ಯ ಗೃಹ ಸಚಿವರವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಸವರಾಜ್ ಬೊಮ್ಮಾಯಿ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆಯಲ್ಲಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ

ಕೋವಿಡ್ ನೋಡಲ್ ಅಧಿಕಾರಿಗಳಾದ ಪ್ರಶಾಂತ್ ಭಟ್ ಇವರು ಕೋವಿಡ್ 19 ಸಾಂಕ್ರಾಮಿಕ ರೋಗದ ಅಂಕಿಅಂಶಗಳ ಬಗ್ಗೆ ವಿವರಣೆ ನೀಡುತ್ತಾ ವಿವಿಧ ಸ್ತರಗಳಲ್ಲಿ ಮಾನವ ಸಂಪನ್ಮೂಲದ ಹೆಚ್ಚಿನ ಅವಶ್ಯಕತೆಯ ಬಗ್ಗೆ ತಿಳಿಸಿದರು. ಈ ಬಗ್ಗೆ ಉಸ್ತುವಾರಿ ಸಚಿವರು ಮಾನವ ಸಂಪನ್ಮೂಲಗಳನ್ನು ಕೂಡಲೇ ಅವಶ್ಯಕತೆಗನುಗುಣವಾಗಿ ವ್ಯವಸ್ಥೆ ಮಾಡುವ ಬಗ್ಗೆ ತಿಳಿಸಿದರು.

ಬಳಿಕ ಮಾತನಾಡಿದ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಪ್ರಸ್ತುತ ಇರುವ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ವೈಯಕ್ತಿಕ ಶೌಚಾಲಯ ಮತ್ತು ಸ್ನಾನಗ್ರಹದ ಕೊರತೆ ಇರುವುದರಿಂದ ಕರೋನ ವೈರಸ್ ಸಾಮೂಹಿಕವಾಗಿ ಹರಡುವ ಸಾಧ್ಯತೆ ಇರುವುದರಿಂದ ಇದರ ಬದಲಿಗೆ 14 ದಿನಗಳ ಹೊಂ ಕ್ವಾರೈಂಟೈನ್ ಮಾಡಿ ಮನೆಗಳನ್ನು ಸೀಲ್ ಡೌನ್ ಮಾಡುವಂತೆ ಸಲಹೆ ನೀಡಿದರು.

ಪ್ರತಿಕ್ರಿಯೆ ನೀಡಿದ ಗೃಹ ಸಚಿವರು ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಪಷ್ಟ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದರು ಮತ್ತು ಹೊಂ ಕ್ವಾರೈಂಟೈನ್ ಬಗ್ಗೆ ಎಸ್.ಓ.ಪಿ ನಡೆಸಿ ಸ್ಥಳೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಚಲನವಲನಗಳ ಬಗ್ಗೆ ನಿಗಾವಹಿಸುವಂತೆ ಜಿಲ್ಲಾಡಳಿತಕ್ಕೆ ತಿಳಿಸುವುದರ ಜೊತೆಯಲ್ಲಿ ಹೊಂ ಕ್ವಾರೈಂಟೈನ್ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆಡಳಿತಕ್ಕೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಂದಾಪುರ ಶಾಸಕರಾದ ಶ್ರೀನಿವಾಸ್ ಶೆಟ್ಟಿ, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪಶ್ಚಿಮ ವಲಯದ ಇನ್ಸ್ಪೆಕ್ಟರ್ ಜನರಲ್ ಪೋಲಿಸ್ ರವರಾದ ದೇವ್ ಜ್ಯೋತಿ ರೇ, ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗದ ಪ್ರೀತಿ ಗೆಲ್ಹೋಟ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here