ನಟಿ ಮಯೂರಿ ಮಧ್ಯರಾತ್ರಿ ಬ್ರಾಹ್ಮೀ ಮುಹೂರ್ತದಲ್ಲಿ ಮದುವೆ

0
42

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಮಯೂರಿ.
ಸ್ಯಾಂಡಲ್ ವುಡ್ ನಟಿ ಮಯೂರಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ.

ರಾತ್ರಿ 2.30ರಿಂದ 3 ಗಂಟೆಯ ಬ್ರಾಹ್ಮೀ ಮುಹೂರ್ತದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕೇವಲ ನಟಿ ಮಯೂರಿ ಹಾಗೂ ಅರುಣ್ ಅವರ ಕುಟುಂಬಸ್ಥರು ಭಾಗಿಯಾಗಿದ್ದರು.

ಸುಮಾರು 10 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮಯೂರಿ ಹಾಗೂ ಅರುಣ್ ಕುಮಾರ್ ಇದೀಗ ಎರಡೂ ಮನೆಯವರ ಒಪ್ಪಿಗೆಯನ್ನು ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

LEAVE A REPLY

Please enter your comment!
Please enter your name here