ಕೊಡಗು : ಅಂತರಜಿಲ್ಲಾ ಡಕಾಯಿತರಬಂಧನ: 4 ವಾಹನಗಳು ಸೇರಿ12ಲಕ್ಷ ಮೌಲ್ಯದ ಸ್ವತ್ತು ವಶ.

0
42

ಕೊಡಗು:ಇತ್ತೀಚೆಗೆ ಜಿಲ್ಲೆಯ ನಾಗರೀಕರಲ್ಲಿ ಭೀತಿ ಮೂಡಿಸಿದ್ದವಿರಾಜಪೇಟೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.ಮೇ 21 ರಂದು ರಾತ್ರಿ ವಿರಾಜಪೇಟೆ ನಗರದ ಶಿವಾಸ್ ಜಂಕ್ಷನ್ ಬಳಿಯ ಮನೆಯೊಂದಕ್ಕೆ ನುಗ್ಗಿ ಮನೆಯಲಿದ್ದವರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ ದರೋಡೆ ನಡೆಸಿದ್ದು ಈ ಪ್ರಕರಣ ಜಿಲ್ಲೆಯ ಜನರಲ್ಲಿ ಭಯವನ್ನು ಉಂಟುಮಾಡಿತ್ತು.ಈ ಪ್ರಕರಣದ ಪತ್ತೆಗಾಗಿ ರಚಿಸಲಾಗಿದ್ದ ತನಿಖಾ ತಂಡವು ಜೂನ್ 9ರಂದು ಎಮ್ಮೆಮಾಡು ನಿವಾಸಿಯಾದ ಇಬ್ರಾಹಿಂ ಖಲೀಲ್ ಎಂಬ ಆರೋಪಿಯನ್ನು ವಶಕ್ಕೆ ಪಡೆದು ಆತನಿಂದ ಕೃತ್ಯಕ್ಕೆ ಬಳಸಿದ ಒಂದು ಮಾರುತಿ 800 ಕಾರನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳಾದ ಮತ್ತೊಬ್ಬ ಎಮ್ಮೆಮಾಡು ನಿವಾಸಿಗಳಾದ ಕಡುವಣಿ ಅಶ್ರಫ್ ಮತ್ತು ಮುಸ್ತಾಫ ರವರುಗಳನ್ನು ಜೂನ್ 14 ರಂದು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದಾಗ ಈ ಆರೋಪಿಗಳು ಈ ಹಿಂದೆ ಮೈಸೂರು ಜಿಲ್ಲೆ ಹಾಗೂ ಕೊಡಗು ಜಿಲ್ಲೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಅಂಶ ಬೆಳಕಿಗೆ ಬಂದಿರುತ್ತದೆ.ಅಲ್ಲದೆ ಇದೇ ಆರೋಪಿಗಳು ಎರಡು ತಿಂಗಳ ಹಿಂದೆ ವಿರಾಜಪೇಟೆ ನಗರದ ಶ್ರೀನಿವಾಸ ಎಂಬುವವರ ಮನೆಯಲ್ಲಿ ಮನೆ ಕಳ್ಳತನ ಮಾಡಿದ್ದು ಅಲ್ಲಿಂದ ಕದ್ದೊಯ್ದಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಮಡಿಕೇರಿ ಗ್ರಾಮಾಂತರ ಠಾಣೆ ಹಾಗು ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದ ಕಾಫಿ ಮತ್ತು ಕರಿಮೆಣಸು ಕಳ್ಳತನದ ಒಂದೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕಂಡುಬಂದಿದ್ದು ಈ ಪ್ರಕರಣಗಳಲ್ಲಿ 3 ಚೀಲ ಕಾಫಿ ಹಾಗು 400 ಕೆ.ಜಿ ಕರಿಮೆಣಸನ್ನು ವಶಪಡಿಸಿಕೊಳ್ಳಲಾಗಿದೆ. ಈ ಆರೋಪಿಗಳ ಬಂಧನದಿಂದ ವಿರಾಜಪೇಟೆ ನಗರದ- 2 ಪ್ರಕರಣ, ಮಡಿಕೇರಿ ಗ್ರಾಮಾಂತರ ಠಾಣೆಯ-1 ಹಾಗೂ ನಾಪೋಕ್ಲು ಪೊಲೀಸ್ ಠಾಣೆಯ-1 ಕಳ್ಳತನ ಪ್ರಕರಣಗಳು ಪತ್ತೆಯಾಗಿದ್ದು, ಅಂದಾಜು 12 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಮೊಬೈಲ್ ಫೋನ್, ಕಾಫಿ, ಕಾಳುಮೆಣಸು ಮತ್ತು 3 ಕಾರು ಒಂದು ಗೂಡ್ಸ್ ಆಟೋಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದೇ ಆರೋಪಿಗಳು ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಇರುವ ಇತರ ಭಾಗಗಳಲ್ಲಿ ಶ್ರೀಮಂತರ ಮನೆಗಳನ್ನು ಗುರ್ತಿಸಿ ದರೋಡೆ ಮಾಡುವ ಯೋಜನೆಗಳನ್ನು ಹೊಂದಿದ್ದು ಇವರುಗಳ ಬಂಧನದಿಂದ ಮುಂದೆ ನಡೆಯಬಹುದಾಗಿದ್ದ ಹಲವಾರು ಘೋರ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಈ ತಂಡ ಯಶಸ್ವಿಯಾಗಿರುತ್ತದೆ.

LEAVE A REPLY

Please enter your comment!
Please enter your name here